ಮೈಸೂರು: ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ವ್ಯಕ್ತಿಗತ ವೈಷಮ್ಯದಿಂದ ಉಂಟಾದ ದ್ವೇಷದ ಪರಿಣಾಮವಾಗಿ ಮತ್ತೊಂದು ಭೀಕರ ಹತ್ಯೆ ನಡೆದಿದೆ.
ಕಾರ್ತಿಕ್ ಎಂಬ ಯುವಕನನ್ನು ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಏಳಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಸುದೀರ್ಘ ತನಿಖೆ ಕೈಗೆದುಕೊಂಡಿದ್ದಾರೆ. ಹತ್ಯೆಯ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ತಿಳಿದುಕೊಳ್ಳಲು ತನಿಖೆ ಮುಂದುವರೆದಿದೆ.