ಮೈಸೂರು: ಪ್ರಸಿದ್ಧ ಚಾಮುಂಡಿ ಬೆಟ್ಟದಲ್ಲಿ ಹೊರರಾಜ್ಯದ ಯುವಕರೊಬ್ಬರ ಗುಂಪು ಸಾರ್ವಜನಿಕ ಸ್ಥಳದಲ್ಲಿ ಬಟ್ಟೆ ಬಿಚ್ಚಿ ಅಸಭ್ಯ ವರ್ತನೆ ನಡೆಸಿದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಯುವಕರನ್ನು ವಶಕ್ಕೆ ಪಡೆದು, ಎಚ್ಚರಿಕೆ ನೀಡಿ ಬಳಿಕ ಬಿಡಲಾಗಿದೆ.
ಯುವಕರು ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದ ದೃಶ್ಯವನ್ನು ಸಾರ್ವಜನಿಕರು ಚಿತ್ರಿಸಿ, ಪೋಲಿಸರಿಗೆ ದೂರು ನೀಡಿದರು. ಪರಿಣಾಮ ಚಾಮುಂಡಿ ಬೆಟ್ಟ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ, ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ ಯುವಕರಿಗೆ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುವುದು ಅಸಭ್ಯ ಕೃತ್ಯವಾಗಿದ್ದು, ಅದು ಕಾನೂನುಬಾಹ್ಯ ಎನ್ನುವುದನ್ನು ವಿವರಿಸಿ, ಮುಚ್ಚಳಿಕೆ ಪತ್ರ ಪಡೆದು ಅವರನ್ನು ಬಿಡುಗಡೆ ಮಾಡಲಾಗಿದೆ.ಇದನ್ನು ಓದಿ –ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು: ಸಿ.ಎಂ ಸಿದ್ದರಾಮಯ್ಯ
ಈ ಬಗ್ಗೆ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದು, ಸಾರ್ವಜನಿಕ ಶಿಸ್ತಿನ ಕಡೆ ಯಥಾವತ್ತು ಎಚ್ಚರಿಕೆ ನೀಡಿರುವುದಾಗಿ ತಿಳಿಸಿದ್ದಾರೆ.